ಹುಣ್ಸೆಕಟ್ಟೆ: ಸ.ಕಿ.ಪ್ರಾ.ಶಾಲೆ ಹುಣ್ಸೆಕಟ್ಟೆ ಹಾಗೂ ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಹುಣ್ಸೆಕಟ್ಟೆ ಆಶ್ರಯದಲ್ಲಿ ನ.17 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಕು. ಅನ್ವಿ ವಹಿಸಿದ್ದು , ಅಂಗನವಾಡಿ ಕೇಂದ್ರದ ಪುಟಾಣಿ ಪೂರ್ಣಶ್ರೀ ಉದ್ಘಾಟನೆಯನ್ನು ನೆರವೇರಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಡಿಎಂ ಸಿ ಅಧ್ಯಕ್ಷೆ ಶ್ರೀಮತಿ ಸೌಮ್ಯ,ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಆಶಾ, ಹುಣ್ಸೆಕಟ್ಟೆ ಶಾಲಾ ಮುಖ್ಯ ಶಿಕ್ಷಕರು ಶ್ರೀ ಪ್ರಶಾಂತ್ ಪೂಜಾರಿ , ಸ.ಹಿ.ಪ್ರಾ.ಶಾಲೆ ಶಿರ್ಲಾಲು ಮುಖ್ಯ ಶಿಕ್ಷಕರು ಶ್ರೀ ಕರಿಯಪ್ಪ ಎ .ಕೆ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ರಜನಿ ಶೆಟ್ಟಿ ಸ್ವಾಗತಿಸಿ, ಪ್ರಶಾಂತ್ ಪೂಜಾರಿ ಪ್ರಾಸ್ತಾವಿಕ ನುಡಿಯೊಂದಿಗೆ ಧನ್ಯವಾದವನ್ನು ತಿಳಿಸಿದರು.ನಿರೂಪಣೆಯನ್ನು ವಿದ್ಯಾರ್ಥಿನಿ ಸಾಕ್ಷಿ ನೆರವೇರಿಸಿದರು. ಸಭಾ ಕಾರ್ಯಕ್ರಮ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ, ಬಳಿಕ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು