ನಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ನಡೆದ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ "ನಮ್ಮಹಕ್ಕಿಗಾಗಿ ನಮ್ಮ ಹೆಜ್ಜೆ" ಬೃಹತ್ ಜನಾಂದೋಲನ ಪ್ರತಿಭಟನೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ಸದಾನಂದ ಉಂಗಿಲಬೈಲು, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಅಜಿತ್ ಅರಿಗ, ನಡ ಶಕ್ತಿ ಅಧ್ಯಕ್ಷರಾದ ಕರುಣಾಕರ, ಪ್ರಮುಖರಾದ ಸುಧಾಕರ್ ಬಿಎಲ್, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.









